ದಾವಣಗೆರೆ: ಕೇಂದ್ರ ಲೋಕಸೇವಾ ಆಯೋಗ( ಯುಪಿಎಸ್ ಸಿ ) ಪರೀಕ್ಷೆಯಲ್ಲಿ ದಾವಣಗೆರೆಯ ಅವಿನಾಶ್ ವಿ. ಅವರು ಮೊದಲ ಪ್ರಯತ್ನದಲ್ಲೇ 31ನೇ ರ‍್ಯಾಂಕ್ ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.
ಜನತಾ ಲಾಡ್ಜ್, ಜನತಾ ಡಿಲಕ್ಸ್, ಆನಂದ ರೆಸಿಡೆನ್ಸಿ ಮಾಲೀಕ ವಿಠಲರಾವ್ ಪುತ್ರರಾಗಿರುವ ಅವಿನಾಶ್ ದಾವಣಗೆರೆಯ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣ, ತೋಳಹುಣಸೆಯ ಪಿಎಸ್‌ಎಸ್‌ಇಎಂಆರ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರೈಸಿದ್ದರು. ಧವನ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪಿಯು ಮುಗಿಸಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ 2020ರಲ್ಲಿ ಐದು ವರ್ಷಗಳ ಕಾನೂನು ಪದವಿಯನ್ನು ಪಡೆದಿದ್ದ. ನಂತರ ಬೆಂಗಳೂರಿನ ‘ಇನ್‌ಸೈಟ್ಸ್ ಐಎಎಸ್’ ಕೋಚಿಂಗ್ ಸೆಂಟರ್‌ನಲ್ಲಿ ಒಂದು ವರ್ಷ ತರಬೇತಿ ಪಡೆದು ಯುಪಿಎಸ್‌ಸಿ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ 31ನೇ ರ‍್ಯಾಂಕ ಪಡೆದು ರಾಜ್ಯದ ಗಮನ ಸೆಳೆದಿದ್ದಾರೆ.