Connect with us

Dvgsuddi Kannada | online news portal | Kannada news online

ದಾವಣಗೆರೆ: ಆಕಸ್ಮಿಕ ಮರಣ ಹೊಂದಿದ ಕುರಿಗಾಹಿಗಳಿಗೆ  5 ಲಕ್ಷ ವರೆಗೆ ವಿಮಾ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಆಕಸ್ಮಿಕ ಮರಣ ಹೊಂದಿದ ಕುರಿಗಾಹಿಗಳಿಗೆ  5 ಲಕ್ಷ ವರೆಗೆ ವಿಮಾ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನಲ್ಲಿ ಕುರಿ/ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದ್ದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ ರೂ.5,00,000 (ರೂ.ಐದು ಲಕ್ಷ ಮಾತ್ರ)ಗಳಿಗೆ ವಿಮಾ ಸೌಲಭ್ಯ ಒದಗಿಸಲು ಕುರಿಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶುಪಾಲನೆ ಇಲಾಖೆ ಇವರಿಂದ ಪಡೆದು ಜೂನ್ 10 ರ ಒಳಗೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶುಪಾಲನೆ ಇಲಾಖೆ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ದಾವಣಗೆರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top