ದಾವಣಗೆರೆ: ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.
ಹಾಲುವರ್ತಿ, ಆನಗೋಡು ಮತ್ತು ಉಡುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಿ ದರು. ಸುಮಾರು 57 ಸರ್ವೇ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ, ಹೈ ಟೆನ್ ಶನ್ ವಿದ್ಯುತ್ ಮರ ಹಾದು ಹೋಗಿರುವುದು, ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು, ವೀಕ್ಷಣೆ ಮಾಡಿದ ಸ್ಥಳದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪಿಸುವ ಸಾಧ್ಯಾಸಾಧ್ಯತೆಗಳ ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.



