ದಾವಣಗೆರೆ: ಆರ್ಎಸ್ಎಸ್ ವಿಚಾರಕ್ಕೆ ಬಂದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ. ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುದ್ಧಿಭ್ರಮಣೆ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಡ್ಡಿ ಅಭಿಯಾನದ ಬಗ್ಗೆ ಮಾತಾಡುವ ಸಿದ್ದರಾಮಯ್ಯಗೆ ಬುದ್ಧಿ ಇಲ್ಲ. ಆರ್ಎಸ್ಎಸ್ ದೇಶ ಸೇವೆಗೆ ಹೆಸರಾದ ಸಂಸ್ಥೆ. RSS ಬಗ್ಗೆ ಮಾತನಾಡುವ ಕಾಂಗ್ರೆಸ್ನವರಿಗೆ ಬುದ್ಧಿಭ್ರಮಣೆ ಆಗಿದೆ. ಈ ರೀತಿ ಹೇಳಿಕೆ ನೀಡುವುದು ಸಿದ್ದರಾಮಯ್ಯಗೆ ಶೋಭೆ ತರಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.



