ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ಐಎಟಿ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಬೇಸಾಯ ತಜ್ಞರು ಮಲ್ಲಿಕಾರ್ಜುನ್ ಪಶು ಅವರು ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಹಾಗೂ ನಮಗಿರುವುದು ಒಂದೇ ಭೂಮಿ ಅದನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ಶ್ರೀ ರುದ್ರಪ್ಪ, ನಿವೃತ್ತ ಕೃಷಿ ಸಹಾಯಕ ಅಧಿಕಾರಿಗಳು ನೀಡಲಾಯಿತು.ಕಾರ್ಯಕ್ರಮದಲ್ಲಿ ಕೃಷಿ ಪರಿಕರ ಡಿಪ್ಲೊಮಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದಾವಣಗೆರೆ: ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



