ದಾವಣಗೆರೆ: 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸಂತೇಬೆನ್ನೂರಿನ ಪುಷ್ಕರಣಿಯ ಆವರಣದಲ್ಲಿ ಆಯೋಜಿಸಲಾಗಿದ್ದು ಜಿಲ್ಲೆಯ ಎಲ್ಲ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಯೋಜನೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 21 ರಂದು ಹರಿಹರ ಪಟ್ಟಣದ ಹರಿಹರೇಶ್ವರ ದೇವಸ್ಥಾನದ ಆವರಣ ಹಾಗೂ ಹೊನ್ನಾಳಿಯ ಹಿರೇಕಲ್ಮಠದ ಆವರಣದಲ್ಲಿ ತಾಲ್ಲೂಕು ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಈ ಬಾರಿಯ ಘೋಷಣೆ “ಮಾನವೀಯತೆಗಾಗಿ ಯೋಗ” ಧ್ಯೇಯವಾಕ್ಯದೊಂದಿಗೆ ಯೋಗ ದಿನ ಆಚರಿಸಲಾಗುತ್ತಿದೆ. ಜಿಲ್ಲೆಯ ಸ್ವಯಂ ಸೇವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಒಳಗೊಂಡಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೆ ಸಹಕರಿಸಬೇಕು ಎಂದರು.
ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷರಾದ ವಾಸುದೇವ ರಾಯ್ಕರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ನಮ್ಮ ಒಕ್ಕೂಟದ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಹಾಗೂ ಶನಿವಾರ ವಾಕಾಥಾನ್ ಆಯೋಜಿಸಲಾಗಿದ್ದು ಎಲ್ಲರೂ ಪಾಲ್ಗೋಳ್ಳುವಂತೆ ಮನವಿ ಮಾಡಿದರು. ಸಭೆಯಲ್ಲಿ ಜಿ.ಪಂ ಸಿಇಓ ಡಾ.ಎ. ಚನ್ನಪ್ಪ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ರಾಮಗೊಂಡ ಬಸರಗಿ, ಜಿಲ್ಲಾ ಆಯುμï ಅಧಿಕಾರಿ ಡಾ.ಶಂಕರಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪಾಲಾಕ್ಷಿ, ಡಾ.ಸಿದ್ದೇಶ್, ಸೇರಿದಂತೆ ಇತರರು ಹಾಜರಿದ್ದರು.



