ದಾವಣಗೆರೆ: ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಅ ರಗ ಜ್ಞಾನೇಂದ್ರ ಅವರು ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಜೂ.08 ರಂದು ಬೆಳಿಗ್ಗೆ 07.45 ಕ್ಕೆ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೇಕೊಪ್ಪದಿಂದ ಹೊರಟು ಬೆಳಗ್ಗೆ 10.00 ಗಂಟೆಗೆ ದಾವಣಗೆರೆಗೆ ಆಗಮಿಸುವರು. ನಂತರ ಬೆ.10 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯುವ ದಾವಣಗೆರೆ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಭಾಗವಹಿಸುವರು. ನಂತರ ಮ.12 ಕ್ಕೆ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಜೆ.ಡಿ.ಮಧುಚಂದ್ರ ತೇಜಸ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



