ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಸಂತೇಬೆನ್ನೂರು ಸಂಯುಕ್ತಾಶ್ರಯದಲ್ಲಿ ಪಾಪ್ಕಾರ್ನ್ ಬೆಳೆಯಲ್ಲಿ ಅಂತರ ಬೆಳೆಯಾಗಿ ತೊಗರಿಯ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಚನ್ನಗಿರಿ ತಾಲ್ಲೂಕಿನ ದೊಡ್ಡಬ್ಬಿಗೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಮಾತನಾಡಿ, ಮಳೆಯಾಧಾರಿತ ಕೃಷಿ ಚಟುವಟಿಕೆಗಳಲ್ಲಿ ಏಕಬೆಳೆ ಪದ್ಧತಿ ಬದಲು ಅಂತರ ಬೆಳೆಗಳನ್ನು ಮಾಡಿಕೊಳ್ಳುವುದು ಸೂಕ್ತ. ಪಾಪ್ಕಾರ್ನ್ ಬೆಳೆಯಲ್ಲಿ ನವೀನ ತಳಿಯಾದ ತೊಗರಿ TS-3R ಇನ್ನು ಅಂತರ್ ಬೆಳೆಯಾಗಿ ಬೆಳೆಯುವುದರಿಂದ ಆದಾಯದ ಮಾಡಿಕೊಳ್ಳಬಹುದು.
ಮಣ್ಣು ವಿಜ್ಞಾನಿ ಎಚ್ ಎಂ ಸಣ್ಣ ಗೌಡರು ಜೈವಿಕ ಗೊಬ್ಬರಗಳಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ರಾಸಾಯನಿಕ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡಬಹುದು ಎಂದರು.
ಮಹತಬ್ ಅಲಿ, ಕೃಷಿ ಇಲಾಖೆಯ ಸವಲತ್ತುಗಳನ್ನು ಬಳಸಿಕೊಂಡು ವಿಜ್ಞಾನಿಗಳು ಹೇಳಿದ ತಂತ್ರಜ್ಞಾನಗಳನ್ನು ಬಳಸಿಕೊಳ್ಳಬೇಕು ಎಂದರು.
ಶ್ರೀ ರಘುರಾಜ್ ಮಾತನಾಡಿ, ರೈತ ಕ್ಷೇತ್ರ ಪಾಠಶಾಲೆ ಯಿಂದ ರೈತರಿಗೆ ಬಿತ್ತನೆಯಿಂದ ಹಿಡಿದು ಮಾರುಕಟ್ಟೆ ಮಾಡುವ ತನಕ ಮಾಹಿತಿಯನ್ನು ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಹಬ್ಬಿಗೆರೆ ಗ್ರಾಮದ ಪ್ರಗತಿಪರ ರೈತರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.



