Connect with us

Dvgsuddi Kannada | online news portal | Kannada news online

ಸಾಮೂಹಿಕ ವಿವಾಹಕ್ಕೆ 55 ಸಾವಿರ ಬಂಪರ್ ಆಫರ್ ಕೊಟ್ಟ ರಾಜ್ಯ ಸರ್ಕಾರ..!

ರಾಜ್ಯ ಸುದ್ದಿ

ಸಾಮೂಹಿಕ ವಿವಾಹಕ್ಕೆ 55 ಸಾವಿರ ಬಂಪರ್ ಆಫರ್ ಕೊಟ್ಟ ರಾಜ್ಯ ಸರ್ಕಾರ..!

ಡಿವಿಜಿ ಸುದ್ದಿ, ಉಡುಪಿ:  ಸಾಮೂಹಿಕ ವಿವಾಹವಾಗಲು ಇಚ್ಚಿಸುವರಿಗೆ ರಾಜ್ಯ ಸರ್ಕಾರ ಬಂಪರ್ ಆಫರ್ ನೀಡಿದೆ. ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ತಾನದಲ್ಲಿ ಮದುವೆಯಾದವರಿಗೆ 55 ಸಾವಿರ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗುರುವಾರ ಉಡುಪಿಯ  ಜಿಲ್ಲಾಧಿಕಾರಿ ಕಚೇರಿಯಲ್ಲಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,  ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏ.26 ರಂದು ಸಾಮೂಹಿಕ ವಿವಾಹಗಳು ನಡೆಯಲಿವೆ.

55 ಸಾವಿರ ನೆರವು

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ನೋಂದಣಿ ಮಾಡಿಸಿಕೊಂಡ ವರನಿಗೆ ಪಂಚೆ, ಶಲ್ಯ ಖರೀದಿ ಮತ್ತು ಇತರ ಖರ್ಚಿಗೆಂದು  5 ಸಾವಿರ ವಧುವಿಗೆ ಧಾರೆ ಸೀರೆ ಖರೀದಿ ಮತ್ತು ಇತರ ಖರ್ಚಿಗೆಂದು 10 ಸಾವಿರ  ಚಿನ್ನ ತಾಳಿ ಖರೀದಿಗೆ  40 ಸಾವಿರ  ಹೀಗೆ ಒಟ್ಟು 55 ಸಾವಿರ ನೆರವು ನೀಡಲಾಗುವುದು ಎಂದು  ತಿಳಿಸಿದರು.

ಹೆಸರು ನೋಂದಣಿಗೆ ಮಾರ್ಚ್ 27 ಕೊನೆ ದಿನ

ಈ ಮೊತ್ತವನ್ನು ವಿವಾಹದ ದಿನವೇ ವಧು–ವರರ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್‌ ಮೂಲಕ ಜಮೆ ಮಾಡಲಾಗುವುದು. ಹೆಸರು ನೋಂದಣಿಗೆ ಮಾರ್ಚ್‌ 27 ಕೊನೆಯ ದಿನ. ಏ.1ರಂದು ನೋಂದಾಯಿತ ವಧು–ವರರ ವಿವರಗಳನ್ನು ದೇವಾಲಯಗಳಲ್ಲಿ ಪ್ರಕಟಿಸಲಾವುದು. ಏ.6ರವರೆಗೆ ಪಟ್ಟಿಗೆ ಆಕ್ಷೇಪಣೆಗೆ ಅವಕಾಶ ಇರಲಿದೆ. 11ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ.

ಉತ್ತಮ ಆದಾಯವಿರುವ 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ವಿವಾಹ ನೋಂದಣಿಗೆ ಎಪಿಎಲ್, ಬಿಪಿಎಲ್ ಮಾನದಂಡ ಇಲ್ಲ. ಸಾಮೂಹಿಕ ವಿವಾಹದ ಬಗ್ಗೆ ಟೋಲ್‌ ಫ್ರೀ ಸಂಖ್ಯೆಯನ್ನು ಶೀಘ್ರದಲ್ಲಿಯೇ  ತಿಳಿಸಲಾಗುವುದು ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top