ದಾವಣಗೆರೆ: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 44 ಪುರುಷ/ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜುಲೈ.01 2022 ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) – 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 44 ಅಭ್ಯರ್ಥಿಗಳ ಸೀಟ್‍ಗಳನ್ನು ಕಾಯ್ದಿರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು https://khtigadag.ac.in/AdmissionForm.pdf
ವೆಬ್‍ನಲ್ಲಿ ಡೌನ್ಲೊಡ್ ಮಾಡಿಕೊಳ್ಳಬಹುದು.
ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-587102 (ಕರ್ನಾಟಕ) ಇವರಿಗೆ ನೇರವಾಗಿ ಸಲ್ಲಿಸಲು ಜೂ.20 ಕೊನೆಯ ದಿನವಾಗಿರುತ್ತದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‍ಗಾಗಿ ಕರೆಯಲಾಗುವುದು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಫಾರಂಗಳಿಗಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ರಾಮಾಂಜನೇಯ ಪ್ಲಾಜ, ಕಾಲೇಜ್ ರೋಡ್, ನಿಟ್ಟುವಳ್ಳಿ ಅಥವಾ ದೂ.ಸಂ 08192-262362 ಗೆ ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ(ಜಿಲ್ಲಾ ಪಂಚಾಯತ್) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



