ಬೆಂಗಳೂರು : 2021-22 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 61.88 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸುದ್ದಿಗೋಷ್ಠಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಈ ಬಾರಿ ಪರೀಕ್ಷೆಯಲ್ಲಿ 61.88 ರಷ್ಟು ಮಕ್ಕಳು ಉತ್ತಿರ್ಣರಾಗಿದ್ದಾರೆ. ಈ ಬಾರಿ ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಗಳಲ್ಲಿ 61.78 ರಷ್ಟು , ಗ್ರಾಮಾಂತರ ಪ್ರದೇಶದಲ್ಲಿ 62.18 ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದರ, ಚಿತ್ರದುರ್ಗ ಜಿಲ್ಲೆ ಕೊನೆ ಸ್ಥಾನ ಪಡೆದಿದೆ.
ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.



