ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ಅಂತರ ವಲಯ ಪುರುಷರ ಕೋ ಕೋ ಪಂದ್ಯಾವಳಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ ವೈ. ವಿಜಯಕುಮಾರ್ ಉದ್ಘಾಟಿಸಿದರು. ವಿವಿಧ ಕಾಲೇಜುಗಳಿಂದ ಪುರುಷ ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಣಾಧಿಕಾರಿಗಳು ಈ ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಮೊದಲನೇ ಬಹುಮಾನವನ್ನು ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು, ದ್ವಿತೀಯ ಬಹುಮಾನವನ್ನು ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ಬೆಂಗಳೂರು ಮತ್ತು ತೃತೀಯ ಬಹುಮಾನವನ್ನು ಎಸ್ಐಟಿ ತುಮಕೂರು ಪಡೆದುಕೊಂಡವು.
ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ತಂಡದ ಕ್ಯಾಪ್ಟನ್ ಮತ್ತು ದೈಹಿಕ ಶಿಕ್ಷಣ ಅಧಿಕಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಜಿಎಂಐಟಿ ಕಾಲೇಜು ಎಲ್ಲಾ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿದ್ದು ಕಾರ್ಯಕ್ರಮದ ಯಶಸ್ವಿಗೆ ಸಂಭವಿಸಿದ್ದು ಮುಂದಿನ ದಿನಗಳಲ್ಲಿ ಈ ರೀತಿಯ ಅನೇಕ ಪಂದ್ಯಾವಳಿಗಳು ನಡೆಯಲು ಮತ್ತು ತಾವುಗಳು ಭಾಗವಹಿಸುವಂತಾಗಲಿ ಎಂದು ಶುಭಕೋರಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ದೈಹಿಕ ಶಿಕ್ಷಣಾಧಿಕಾರಿ ಅಜ್ಜಯ್ಯ ಜಿ ಬಿ, ಕ್ರೀಡಾ ಸಂಯೋಜಕರಾದ ಡಾ ಕಿರಣ್ ಕುಮಾರ್ ಎಚ್ಎಸ್, ತರಬೇತಿ ಮತ್ತು ಉದ್ಯೋಗ ಅಧಿಕಾರಿ ತೇಜಸ್ವಿ ಕಟ್ಟಿಮನಿ ಟಿ ಆರ್, ಎನ್ಎಸ್ಎಸ್ ಸಂಯೋಜಕರಾದ ಡಾ ಓಂಕಾರಪ್ಪ ಎಚ್ಎಸ್, ಕಾಲೇಜಿನ ದೈಹಿಕ ಶಿಕ್ಷಣಾಧಿಕಾರಿ ಅಜ್ಜಯ್ಯ ಜಿ ಬಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



