Connect with us

Dvgsuddi Kannada | online news portal | Kannada news online

ದಾವಣಗೆರೆ: ಜೆಜೆಎಂ ವೈದ್ಯಕೀಯ ಕಾಲೇಜ್ ಬಾಸ್ಕೆಟ್‌ ಬಾಲ್ ಚಾಂಪಿಯನ್

IMG 20220623 WA0003 696x462 1

ದಾವಣಗೆರೆ

ದಾವಣಗೆರೆ: ಜೆಜೆಎಂ ವೈದ್ಯಕೀಯ ಕಾಲೇಜ್ ಬಾಸ್ಕೆಟ್‌ ಬಾಲ್ ಚಾಂಪಿಯನ್

ದಾವಣಗೆರೆ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಬ್ಯಾಸ್ಕೆಟ್ಬಾಲ್ ಪಂದ್ಯಾವಳಿಯ ಪುರುಷರ, ಮಹಿಳಾ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಗರದ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷ ವಿಭಾಗದ ಫೈನಲ್ ನಲ್ಲಿ ಜೆಜೆಎಂ ಮೆಡಿಕಲ್ ಕಾಲೇಜು, ಬೆಂಗಳೂರಿನ ಮೆಡಿಕಲ್ ಕಾಲೇಜ್ ವಿರುದ್ಧ 59-57 ಪಾಯಿಂಟ್ಸ್ ಗಳಿಂದ ಗೆದ್ದುಕೊಂಡಿದೆ. ಪುರುಷರ ವಿಭಾಗದಲ್ಲಿ 36 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 22 ತಂಡಗಳು ಭಾಗವಹಿಸಿದ್ದವು.ಮೂರನೇ ಸ್ಥಾನವನ್ನು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಗೂ ನಾಲ್ಕನೇ ಸ್ಥಾನವನ್ನು ಸೈಂಟ್ ಜಾನ್ಸ್ ಮೆಡಿಕಲ್ ಕಾಲೇಜ್ ಪಡೆದುಕೊಂಡಿತು.

ಮಹಿಳೆಯರ ವಿಭಾಗದಲ್ಲಿ ಜೆಜೆಎಂ ಮೆಡಿಕಲ್ ಕಾಲೇಜು ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜು ಬೆಂಗಳೂರನ್ನು19-17 ರಲ್ಲಿ ಸೋಲಿಸಿ ಚಾಂಪಿಯನ್ ಆಯ್ತು. ಮೂರನೇ ಸ್ಥಾನವನ್ನು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಗೂ ನಾಲ್ಕನೇ ಸ್ಥಾನವನ್ನು ಬೆಂಗಳೂರಿನ ದಂತ ವೈದ್ಯಕೀಯ ಮಹಾವಿದ್ಯಾಲಯ ಪಡೆದುಕೊಂಡವು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್ ಬಿ ಮುರುಗೇಶ್ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಮಹಿಳೆಯರ ವಿಭಾಗದಲ್ಲಿಬೆಂಗಳೂರು ದಂತ ವೈದ್ಯಕೀಯ ಮಹಾವಿದ್ಯಾಲಯ ಆಟಗಾರ್ತಿ ಶರಣ್ಯ ಅತ್ಯುತ್ತಮ ಬಾಲ್ ಹ್ಯಾಂಡ್ಲರ್, ರಾಮಯ್ಯ ಕಾಲೇಜಿನ ಸಂಸ್ಕೃತಿ ಪಾಟೀಲ್ ಬೆಸ್ಟ್ ಶೂಟರ್, ಜೆಜೆಎಂ ಮೆಡಿಕಲ್ ಕಾಲೇಜಿನ ಸೌಗಂಧಿಕ ಪಂದ್ಯಾವಳಿಗೆ ಅತ್ಯುತ್ತಮ ಆಟಗಾರ್ತಿಯಾಗಿ ಪ್ರಶಸ್ತಿ ಪಡೆದರು. ಪುರುಷರು ವಿಭಾದದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರಿಷಬ್ ಅತ್ಯುತ್ತಮ ಬಾಲ್ ಹ್ಯಾಂಡ್ಲರ್, ಬೆಂಗಳೂರು ಮೆಡಿಕಲ್ ಕಾಲೇಜಿನ ಬೆಸ್ಟ್ ಶೂಟರ್ ಆಗಿ ಅಮಿತ್ ಹಾಗೂ ಜೆಜೆಎಂ ಮೆಡಿಕಲ್ ಕಾಲೇಜಿನ ಕಾವ್ಯಾನಂದ ಪಂದ್ಯಾವಳಿಯ ಅತ್ಯುತ್ತಮ ಆಟಗಾರನಾಗಿ ಹೊರಹೊಮ್ಮಿದರು.

ಪ್ರಶಸ್ತಿ ಪಡೆದವರಿಗೆ ಕಾಲೇಜಿನ ಚೇರ್ಮನ್ ಡಾ. ಶಾಮನೂರು ಶಿವಶಂಕರಪ್ಪ, ಬಾಪೂಜಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಎಸ್ ಎಸ್ ಮಲ್ಲಿಕಾರ್ಜುನ್ ಅಭಿನಂದನೆ ಸಲ್ಲಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top