ದಾವಣಗೆರೆ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ವಿಷಯಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಜುಲೈ 25 ರೊಳಗಾಗಿ ಸಲ್ಲಿಸಬಹುದು.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವರು 10 ರೂ. ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಗೆ ಕಳಿಸಿಕೊಡಬಹುದು.
ಹೆಚ್ಚಿನಮಾಹಿತಿಗಾಗಿಅಕಾಡೆಮಿಯವೆಬ್ಸೈಟ್ https://sangeetanrityaacademy.karnataka.gov.in ಗೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್.ಶಿವವರುದ್ರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.