Connect with us

Dvgsuddi Kannada | online news portal | Kannada news online

ದಾವಣಗೆರೆ: ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್.03 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov. . ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ/ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್‍ಸೈಟ್ https://dbcdc.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top