ಡಿವಿಜಿ ಸುದ್ದಿ, ಕೂಡ್ಲಿಗಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಅಮಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಹಾಗೂ ತಮಿಳು ನಾಡಿಗೆ ಹೋಗುತ್ತಿದ್ದ ಮತ್ತೊಂದು ಲಾರಿ ಹಾಗೂ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿದ್ದ ಕಂಟೇನರ್ ಲಾರಿಗಳ ಮಧ್ಯೆ ಡಿಕ್ಕಿ ಆಗಿ ಚಾಲಕ ಗಣೇಶ್(35) ಸ್ಥಳದಲ್ಲೇ ಮೃತಪಟ್ಟಿದ್ದು. ಮತ್ತೊಬ್ಬ ಚಾಲಕ ಕೂಡ್ಲಿಗಿಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಈತನ ಹೆಸರು ತಿಳಿದು ಬಂದಿಲ್ಲ ಎಂದು ಪೂಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಘಟನಾ ಸ್ಥಳಕ್ಕೆ ಕೊಟ್ಟೂರು ಸಿಪಿಐ ರವೀಂದ್ರ ಕುರುಬಗಟ್ಟಿ,ಪಿಎಸೈ ನಾಗರಾಜು ಬೇಟಿಕೊಟ್ಟು, ಪರಿಶೀಲಸಿದ್ದಾರೆ. ಕಾನಾಹೊಸಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



