ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಮಳೆ ಮುಂದುವರಿಯಲಿದೆ.
ಕೊಡಗು, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ, ಸಿದ್ದಾಪುರ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9ರಂದು ರಜೆ ಘೋಷಿಸಲಾಗಿದೆ.