ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ (SUP) ಗಳನ್ನು ನಿಷೇಧಿಸಿದೆ. ಈ ಹಿನ್ನಲೆಯಲ್ಲಿ ಜುಲೈ ಮೊದಲ ವಾರದಲ್ಲಿ ಮಹಾನಗರ ಪಾಲಿಕೆಯ ಮೂರು ಆರೋಗ್ಯ ನಿರೀಕ್ಷಕ ತಂಡಗಳಿಂದ 300 ಕ್ಕೂ ಅಧಿಕ ಉದ್ದಿಮೆಗಳನ್ನು ಪರಿಶೀಲಿಸಿದ್ದು, 101 ಉದ್ದಿಮೆಗಳಿಂದ ಒಟ್ಟು ರೂ. 66,000 ದಂಡ ವಸೂಲಾತಿ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಮಾಹಿತಿಗಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳ ಧ್ವನಿವರ್ಧಕಗಳ ಮೂಲಕ ಪ್ರತಿನಿತ್ಯ ಪ್ರಚಾರ ಮಾಡಲಾಗುತ್ತಿದ್ದು, ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳು ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಭಾಂಗಣದಲ್ಲಿ ಪರಿಸರ ಅಧಿಕಾರಿಗಳಿಂದ ಎಲ್ಲಾ ಉದ್ದಿಮೆದಾರರು ಹಾಗೂ ಸಾರ್ವಜನಿಕರಿಗೆ ಏಕ ಬಳಕೆ ಪ್ಲಾಸ್ಟಿಕ್‍ಗಳ ಬಳಕೆ ಮತ್ತು ಮಾರಾಟ ನಿಷೇಧಿಸುವಂತೆ ಸಭೆ ಆಯೋಜಿಸಿ ಜಾಗೃತಿ ಮೂಡಿಸಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್‍ಗಳ ಉಪಯೋಗಿಸುವುದು ಕಂಡು ಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದಾಗಿ ಸೂಚಿಸಲಾಗಿದೆ.