ಡಿವಿಜಿ ಸುದ್ದಿ, ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು ಸಾಧಿಸಿದ್ದಾರೆ. 3,298 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.
ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಉಸ್ತುವಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಹಿಸಿಕೊಂಡಿದ್ದರು. ಈ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಒಡೆದು ಬಿಜೆಪಿ ಕಮಲ ಅರಳಿಸಿದೆ.



