ಚನ್ನಗಿರಿ: ತಾಲ್ಲೂಕಿನ ಹೊಸ ಬನ್ನಿಹಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದಾರೆ.
ಗ್ರಾಮದ ವೀಣಾ ನಾಗರಾಜಪ್ಪ ಅವರ ಮನೆಯಲ್ಲಿ ಬೆಳಿಗ್ಗೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ಭೀಕರತೆಗೆ ಮನೆಯ
ಹೆಂಚುಗಳು ಹಾರಿ ಹೋಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.
ವೀಣಾ ನಾಗರಾಜಪ್ಪ ಹಾಗೂ ಪಕ್ಕದ ಮನೆಯ ವೀರಭದ್ರಪ್ಪ ಅವರ ತಲೆಯ ಮೇಲೆ ಹೆಂಚುಗಳು ಬಿದ್ದಿವೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪ್ರಕೃತಿ ವಿಕೋಪ ಪರಿಹಾರ ಯೋಜನೆ ಅಡಿ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ, ಗಾಯಾಳುಗಳಿಗೆ ಪರಿಹಾರ ಕೊಡಿಸುವುದಾಗಿ ತಿಳಿಸಿದರು.



