ದಾವಣಗೆರೆ: ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದಲ್ಲಿ ತಡ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹೊಲಗದ್ದೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಗದ್ದೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಇದರ ಮಧ್ಯ ಭತ್ತದ ಗದ್ದೆ ಉಳುಮೆ ಮಾಡುತ್ತಿದ್ದ ಒಂದು ಟ್ರಾಕ್ಟರ್ ಕೂಡ ಮುಳುಗಡೆಯಾಗಿದೆ. ಮಳೆ ನೀರು ಅಪಾರ ಪ್ರಮಾಣದಲ್ಲಿ ಹರಿಯುತ್ತಿದ್ದರಿಂದ ಜನರು ಗದ್ದೆಗೆ ಇಳಿಯದಂತಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನದಿಂದ ಸತತ ಮಳೆಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ದಾವಣಗೆರೆ: ಶ್ಯಾಗಲೆಯಲ್ಲಿ ಭಾರೀ ಮಳೆ ನೀರಿನಲ್ಲಿ ಮುಳುಗಿದ ಟ್ರ್ಯಾಕ್ಟರ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



