ದಾವಣಗೆರೆ: ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ; 41 ಮಿ,ಮೀ ಮಳೆ, 116.35 ಲಕ್ಷ ನಷ್ಟ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ:  ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಸತತ ಮಳೆಯಿಂದ  ಅಪಾರ ಪ್ರಮಾಣದ ಬೆಳೆ, ಮನೆ, ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ.

ಜಿಲ್ಲೆಯಲ್ಲಿ ಆಗಸ್ಟ್ 01 ರಂದು  41.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 116.35 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 5.8 ಮಿ.ಮೀ ಹಾಗೂ ವಾಸ್ತವ ಮಳೆ 34.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 3.1 ಮಿ.ಮೀ ಹಾಗೂ ವಾಸ್ತವ ಮಳೆ 34.9 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 2.9 ಮಿ.ಮೀ ಹಾಗೂ ವಾಸ್ತವ ಮಳೆ 34.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 3.2 ಮಿ.ಮೀ ಹಾಗೂ ವಾಸ್ತವ ಮಳೆ 97.1 ಮಿ.ಮೀ, ಜಗಳೂರು ವಾಡಿಕೆ ಮಳೆ 2.6 ಮಿ.ಮೀ ಹಾಗೂ ವಾಸ್ತವ ಮಳೆ 18.9 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 6.4 ಮಿ.ಮೀ ಹಾಗೂ ವಾಸ್ತವ ಮಳೆ 71.0 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ12 ಕಚ್ಚಾ ಮನೆಗಳು  ಭಾಗಶ: ಹಾನಿಯಾಗಿದ್ದು, ರೂ. 3.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.00 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ ಒಟ್ಟು 2.30 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ, 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2.00 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ ಹಾಗೂ 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ. 0.25 ಲಕ್ಷ ಒಟ್ಟು ರೂ.3.55 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 9.00 ಲಕ್ಷ, 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 6.00 ಲಕ್ಷ, ಒಟ್ಟು ರೂ.15.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 8 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.30.50 ಲಕ್ಷ, 9 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 4.70 ಲಕ್ಷ, 10 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 48.00 ಲಕ್ಷ, 12 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 6.90 ಲಕ್ಷ ಒಟ್ಟು ರೂ. 90.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 7 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.80 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 118, ಹೊನ್ನಾಳಿ ತಾಲ್ಲೂಕಿನಲ್ಲಿ 130 ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 45 ಒಟ್ಟು 293 ಮನೆಗಳಿಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗಿರುತ್ತವೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. ರೂ.116.35 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *