ಡಿವಿಜಿ ಸುದ್ದಿ, ಮೈಸೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ನೇರ ಕಾರಣ. ಉಪ ಚುನಾವಣೆ ಘೋಷಣೆ ಮುನ್ನವೇ ಕುಮಾರಸ್ವಾಮಿ ಬಿಜೆಪಿ ಸರಕಾರ ಬೀಳಿಸುವುದಿಲ್ಲ ಎಂದು ಹೇಳಿದ್ರು. ಹೀಗಾಗಿ ಜನ ಜೆಡಿಎಸ್ ಶೂನ್ಯ ಮಾಡಿಸಿ, ರಾಜ್ಯ ಸರಕಾರ ಭದ್ರ ಮಾಡಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ವ್ಯಂಗ್ಯವಾಡಿದರು.
ಮೈಸೂರಿನಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು,ಜನ ಎಚ್‍ಡಿಕೆ ಮಾತಿನಂತೆ ನಡೆದು ಕೊಂಡಿದ್ದಾರೆ. ಬಿಜೆಪಿ ಸರ್ಕಾರ ಉಳಿಸಿ ಜೆಡಿಎಸ್ ಶೂನ್ಯ ಸಾಧನೆ ಮಾಡಿಸಿದ್ದಾರೆ ಎಂದು ಎಚ್ ಡಿಕೆಗೆ ಟಾಂಗ್ ಕೊಟ್ಟರು.
ಕುಮಾರಣ್ಣ ಒಳ್ಳೆ ಮಾತುಗಾರ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದರೆ ಇತ್ತೀಚೆಗೆ ಅವರು ಆಡುತ್ತಿರುವ ಮಾತುಗಳು ಅಭಿಮಾನಿಗಳನ್ನೇ ಕೆರಳಿಸಿದೆ. ಕುಮಾರಸ್ವಾಮಿ ನಡೆಯೇ ಬೇರೆ, ನುಡಿಯೇ ಬೇರೆ ಆಗಿದೆ. ಇನ್ನಾದರೂ ಅವರು ಬದಲಾಗಬೇಕು. ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಲಿ ಎಂದರು.



