ಶಿವಮೊಗ್ಗ: ರೈತರಿಂದ ಖರೀದಿಸುವ ಹಾಲಿನ ದರವನ್ನು ಆ.11 ರಿಂದ ಪ್ರತಿ ಲೀಟರ್ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು.
ಮಾಚೇನಹಳ್ಳಿ ಹಾಲಿನ ಡೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಒಕ್ಕೂಟ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಹಾಲು ಉತ್ಪಾದನೆ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲ ಕಾಲಕ್ಕೆ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಪ್ರಗತಿಯಾಗಿದ್ದು, ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ ಗೆ ರೂ.1 ಹೆಚ್ಚಿಸಲಾಗುವುದು ಎಂದರು.
ಈ ದರ ಹೆಚ್ಚಳ ಕುರಿತು 02-08-2022 ರಂದು ನಡೆದ ಒಕ್ಕೂಟದ 421 ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಹಾಲಿ ನೀಡುತ್ತಿರುವ ದರ ಪ್ರತಿ ಲೀಟರ್ ಹಾಲಿಗೆ (ಶೇ. 4.0 ಎಸ್ಎನ್ಎಫ್ 8.50%) 29.02 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.30.06/- ಆಗಲಿದೆ. ಸಂಘದಿಂದ ಉತ್ಪಾದರಿಗೆ ಹಾಲಿ ನೀಡುತ್ತಿರುವ ದರ (ಶೇ. 4.0 ಎಸ್ಎನ್ಎಫ್ 8.50%) ಪ್ರತಿ ಲೀಟರ್ ಹಾಲಿಗೆ ರೂ. 27.16 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.28.20 ಆಗಿರುತ್ತದೆ ಎಂದರು.



