ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಫೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಕನಿಕಾ ಸಿಕ್ರಿವಾಲ್ ರವರ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 14 ಜನರನ್ನು ಬಂಧಿಸಲಾಗಿದೆ. ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 39,960 ರೂಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



