ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ನಾಳೆ (ಆ.09) ಆ) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.08 ರಂದು ಚಿಕ್ಕಮಂಗಳೂರಿನಿಂದ ಹೊರಟು ರಾತ್ರಿ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆ.09 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಾರ್ವಜನಿಕರ ಭೇಟಿ ಮಾಡುವರು. ನಂತರ ಮ.01 ಗಂಟೆಗೆ ಹೊನ್ನಾಳಿ ತಾಲ್ಲೂಕುಗಳಿಗೆ ತೆರಳಿ ಕಂದಾಯ ಸಚಿವರೊಂದಿಗೆ ಹೊನ್ನಾಳಿ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. ಮ.3.30ಕ್ಕೆ ಹೊನ್ನಾಳಿಯಿಂದ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



