ದಾವಣಗೆರೆ: ನಗರದ ಆರ್ ಎಂಸಿ ಲಿಂಕ್ ರಸ್ತೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಜೆರಾಕ್ಸ್ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ಮಷಿನ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಕೂಡಲೇ ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸಿದ್ದಾರೆ. ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.



