ಮಲೇಬೆನ್ನೂರು: ಪಟ್ಟಣದ ಜಿಗಳಿ ವೃತ್ತದಲ್ಲಿ ಯುವಕರ ಗುಂಪುವೊಂದು ತ್ರಿವರ್ಣ ಧ್ವಜ ವಿರೂಪಗೊಳಿಸಿದ ಪ್ರಕರಣ ಸಂಬಂಧ ಸ್ಥಳಕ್ಕೆ ಮಾಜಿ ಶಾಸಕ ಬಿ.ಹರೀಶ್ , ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಭೇಟಿ ನೀಡಿ ದೇಶ ವಿರೋಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ದೇಶ ವಿರೋಧಿಗಳು ವಿರೂಪಗೊಳಿಸಿದ ಧ್ವಜ ಬೈಕ್‌ನಲ್ಲಿ ಮೆರವಣಿಗೆ ನಡೆಸಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬೈಕ್ ಮೇಲೆ ಹೋಗುತ್ತಿದ್ದ ಯುವಕರು ವಿರೂಪಗೊಳಿಸಿದ ಧ್ವಜವನ್ನು ಹಿಡಿದು ಮೆರವಣಿಗೆ ನಡೆಸಿದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.
ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್. ಪುರಸಭೆ ಸದಸ್ಯ ಸಿದ್ದೇಶ್, ಮಂಜುನಾಥ್, ರಾಜು, ಐರಣಿ ಅಣ್ಣೇಶ, ಮಹೇಶ್, ಹನುಮಗೌಡ ಜಿಗಳಿ, ಮಹಾಂತೇಶ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಲಿಂಗರಾಜ್ ಹಾಗೂ ಬಿಜೆಪಿ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ದೇಶ ವಿರೋಧಿ ಕೃತ್ಯ ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. 4 ತಿಂಗಳ ಹಿಂದೆ ಹರಿಹರದಲ್ಲಿ ಹಿಂದೂ ಯುವಕನಿಗೆ ಇರಿಯಲಾಗಿತ್ತು. ಹಿಂದೂ ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೀರಿ. ಆದರೆ ಮುಸ್ಲಿಂ ಯುವಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಪೊಲೀಸರು ಕಾನೂನು ಕ್ರಮ ಕೈಗೊಳ್ಳದಿದ್ದರೆ, ನಾವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.