ಚಿಕ್ಕಬಳ್ಳಾಪುರ: ಮುಂದಿನ ಮಾರ್ಚ್ ಒಳಗೆ ದಾವಣಗೆರೆ ಜಿಲ್ಲೆ ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಒಳಗಾಗಿ ನಾಲ್ಕು ಜಿಲ್ಲೆಯಗಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಕ್ರಮ ವಹಿಸಲಾಗಿದ್ದು, ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಚಿತ್ರದುರ್ಗ, ರಾಮನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗಿದ್ದು, ಕಾಮಗಾರಿ ನಡೆಯುತ್ತಿದೆ. ಮುಂದಿನ ಮಾರ್ಚ್ ಒಳಗೆ ದಾವಣೆಗೆರೆ, ವಿಜಯಪುರ, ಉಡುಪಿ, ಬೆಂಗಳೂರು ಗ್ರಾಮಾತಂರ ಸೇರಿ ವಿವಿಧೆಡೆ ಪಿಪಿಪಿ ಮಾದರಿಯಲ್ಲಿಯೇ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುತ್ತದೆ. ರಾಜ್ಯದ ಕಡು ಬಡವರಿಗೂ ವೈದ್ಯಕೀಯ ಸೇವೆ ಸಿಗಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.