ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 06 ರಿಂದ 18 ವರ್ಷ ವಯೋಮಾನದೊಳಗಿರಬೇಕು.
ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಅರ್ಜಿಯನ್ನು ಸೆ.31 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಈ ಕಚೇರಿಯಲ್ಲಿ ಪಡೆದು ಅಕ್ಟೋಬರ್ 11 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-264056 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



