ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಆರ್ ಅಂಜನಪ್ಪ ಅವರನ್ನು ಬೆಂಗಳೂರಿನ ಡಾ.ಜಿ.ಎಸ್ ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ದಾವಣಗೆರೆ ಜಿಲ್ಲೆಯಿಂದ ಸದಸ್ಯರನ್ನಾಗಿ ಆಯ್ಕೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಇವರಿಗೆ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಾಮದೇವಪ್ಪ, ಕಾರ್ಯದರ್ಶಿ ದಿಳ್ಳೆಪ್ಪ, ಕಾಲೇಜಿಗೆ ಭೇಟಿ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಗಿರಿಸ್ವಾಮಿ, ಷಣ್ಮುಖ, ಅರ್ಥಶಾಸ್ತ್ರ ವಿಭಾಗದ ಪ್ರೊ. ಭೀಮಣ್ಣ ಸುಣಗಾರ, ಗಣಿತಶಾಸ್ತ್ರ ವಿಭಾಗದ ಯೋಗೇಶ, ಭೌತಶಾಸ್ತ್ರ ವಿಭಾಗದ ಮನೋಹರ್ ಉಪಸ್ಥಿತರಿದ್ದರು.
ದಾವಣಗೆರೆ: ಡಾ.ಜಿ.ಎಸ್ ಶಿವರುದ್ರಪ್ಪ ಪ್ರತಿಷ್ಠಾನ ಸದಸ್ಯರಾಗಿ ಆಯ್ಕೆಯಾದ ಡಾ.ಎಸ್.ಆರ್ ಅಂಜನಪ್ಪಗೆ ಅಭಿನಂದನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



