ದಾವಣಗೆರೆ: ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಕಾಯಲು ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಬಸವರಾಜ್(55) ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಜಗಳೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವರಾಜ್ ಈ ಹಿಂದೆಯೂ ಕರಡಿ ದಾಳಿ ನಡೆಸಿತ್ತು. ಇದೀಗ ಮತ್ತೆ ದಾಳಿಯಾಗಿದ್ದು, ಗಂಭೀರ ಗಾಯಗಳಾಗಿವೆ. ಕರಡಿ ದಾಳಿ ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಗಾಯಾಳುವಿಗೆ ಸೂಕ್ತ ಪರಿಹಾರ ಸಿಗಬೇಕೆಂದು ಗ್ರಾಮಸ್ಥರುಬ ಆಗ್ರಹಿಸಿದ್ದಾರೆ.ಆಸ್ಪತ್ರೆಗೆ ಅರಣ್ಯ ರಕ್ಷಕ ಆಂಜಿನಪ್ಪ ಹಾಗೂ ಅರಣ್ಯ ವೀಕ್ಷಕ ಮಂಜಪ್ಪ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.