ಬೆಂಗಳೂರು: ಬೆಂಗಳೂರು-ಮೈಸೂರು ರಸ್ತೆಯಲ್ಲಿ ಕ್ಯಾಂಟರ್- ಬೊಲೆರೋ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸಾವನ್ಬಪ್ಪಿದ್ದಾನೆ.
ಘಟಬೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ. ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲಕ ಚಾಲಕ ಸಾವಿಗೀಡಾಗಿದ್ದಾನೆ.ಬೊಲೆರೋ ಸರಕು ಸಾಗಣಿಕೆ ವಾಹನದ ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಚಾಲಕನ ಶವವನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.