ಹಾವೇರಿ: ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಲಾ ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ.ಚಿತ್ರದುರ್ಗ ಕಡೆ ಕರೆದುಕೊಂಡು ಹೋಗುತ್ತಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಈ ಖಚಿತ ಮಾಹಿತಿಯನ್ನು ಆಧರಿಸಿ, ಪೊಲೀಸರು ಬಂಧಿಸಲಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಮೂಲಕ ಮುರುಘಾ ಮಠದ ಇಬ್ಬರು ಬಾಲಕಿಯರು ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಮೈಸೂರಿನ ನಜರಾಬಾದ್ ಠಾಣೆಯಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ಪೊಲೀಸರು ನಿನ್ನೆ ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೇ ವೈದ್ಯಕೀಯ ಪರೀಕ್ಷೆಗೂ ಹಾಜರುಪಡಿಸಿದ್ದರು.ಇದೀಗ ಮುರುಘಾ ಮಠದ ಶಿವಮೂರ್ತಿ ಶಿವಶರಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.