ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ, ಮನೆಗಳಿಗೆ ಹಾನಿಯಾಗಿದೆ. ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮ ಸುತ್ತಮುತ್ತ ಭಾರೀ ಮಳೆ ಹಿನ್ನೆಲೆ ಕೆರೆ ಕೊಡಿ ಬಿದ್ದಿದೆ. ಇದರ ಪರಿಣಾಮ ಜಮೀನುಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಸ್ಥಳಕ್ಕೆ ಶಾಸಕ ಎಸ್. ರಾಮಪ್ಪ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಕೆಂಚನಹಳ್ಳಿ ಗ್ರಾಮದ ಬಳಿ ಜಿಲ್ಲಾ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶೀಘ್ರದಲ್ಲಿ ಕಾಮಗಾರಿ ಆರಂಬಿಸಲು PWD ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕಿನ ಕುರುಬರಹಳ್ಳಿ ಪ್ರದೇಶ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೊಂಡಜ್ಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಜಿ. ಹನುಮಂತಪ್ಪ, ಸದಸ್ಯರು, ಗ್ರಾಮಸ್ಥರು ಇದ್ದರು.