ಬೆಂಗಳೂರು: ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಿಹಾರ ಮೂಲದ ಗೌತಮ್, ಮಂಡಿಲ್, ಮಹಿಳೆ ಸೋನಿ ಎಂಬುವರಿಗೆ ಗಾಯವಾಗಿದೆ. ಇಬ್ಬರು ಸೆಕ್ಯೂರಿಟಿ ಕೆಲಸ ಮಾಡ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೆಎಸ್ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದರು.