ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಮಧ್ಯಾಹ್ನ ಬಿಡುವು ನೀಡಿದ್ದ ಮಳೆ, ಸಂಜೆ ಮತ್ತೆ ಜೋರು ಮಳೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ. ಸತತ ಮಳೆಯಿಂದ ಜಿಲ್ಲೆಯ ಜನ ಬೇಸತ್ತು ಹೋಗಿದ್ದಾರೆ. ಜಮೀನುಗಳಲ್ಲಿ ನೀರು ನಿಂತಿದ್ದು, ಬೆಳೆಗಳಿಗೆ ಅತಿ ತೇವಾಂಶದಿಂದ ಶೀತವಾಗಿದೆ.
ಜಿಲ್ಲೆಯಲ್ಲಿ ಸೆ.04 ರಂದು ಬಿದ್ದ ಮಳೆಯ ವಿವರದನ್ವಯ 5.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ 4.3 ಮಿ.ಮೀ ಹಾಗೂ ವಾಸ್ತವ ಮಳೆ 5.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.2 ಮಿ.ಮೀ ಹಾಗೂ ವಾಸ್ತವ ಮಳೆ 4.5 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 0.8 ಮಿ.ಮೀ ಹಾಗೂ ವಾಸ್ತವ ಮಳೆ 2.1 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 1.6 ಮಿ.ಮೀ ಹಾಗೂ ವಾಸ್ತವ ಮಳೆ 2.1 ಮಿ.ಮೀ, ಜಗಳೂರು ವಾಡಿಕೆ ಮಳೆ 2.2 ಮಿ.ಮೀ ಹಾಗೂ ವಾಸ್ತವ ಮಳೆ 9.1 ಮಿ.ಮೀ, ನ್ಯಾಮತಿಯಲ್ಲಿ ವಾಡಿಕೆ ಮಳೆ 2.1 ಮಿ.ಮೀ ಹಾಗೂ ವಾಸ್ತವ ಮಳೆ 6.0 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .



