ನವದೆಹಲಿ: ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿದ್ದು, ಅವರ ದಿಟ್ಟತನ, ಸಂಘಟನಾ ಚಾತುರ್ಯ, ಛಲವಂತಿಕೆ, ನಾಯಕತ್ವ ನನ್ನನ್ನೂ ಸೇರಿದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪ್ರೇರಣೆ ಎಂದಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರೂ, ಕೇಂದ್ರ ಗೃಹ ಸಚಿವರೂ ಆದ ಸನ್ಮಾನ್ಯ ಶ್ರೀ ಅಮಿತ್ ಶಾ ಜೀಯವರನ್ನು ನಿನ್ನೆ ನವದೆಹಲಿಯಲ್ಲಿ ಭೇಟಿ ಮಾಡಿದ ಸಂದರ್ಭ. ದಿಟ್ಟತನ, ಸಂಘಟನಾ ಚಾತುರ್ಯ ಮತ್ತು ಛಲವಂತಿಕೆಯ ಶ್ರೀ @AmitShah ಜೀಯವರ ನಾಯಕತ್ವ, ನನ್ನನ್ನೂ ಸೇರಿದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪ್ರೇರಣಾದಾಯಕವಾಗಿದೆ. @BSYBJP pic.twitter.com/VFKHIYS82J
— Vijayendra Yediyurappa (@BYVijayendra) December 14, 2019
ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ಸಾಧಿಸಿದ್ದು, ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಖಾತೆ ತೆರಯವಲ್ಲಿ ವಿಜಯೇಂದ್ರ ಕಾರ್ಯತಂತರ ರೂಪಿಸಿದ್ದರು. ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಜಯ ಗಳಿಸುವಲ್ಲಿ ವಿಜಯೇಂದ್ರ ಪಾತ್ರ ಪ್ರಮುಖವಾಗಿದೆ
ಕೆ.ಆರ್ ಪೇಟೆ ಕ್ಷೇತ್ರದಲ್ಲಿ 15 ದಿನಗಳ ಕಾಲ ವಾಸ್ತವ್ಯ ಹೂಡಿದ್ದ ವಿಜಯೇಂದ್ರ, ಪಕ್ಷ ಸಂಘಟನೆಗೆ ಹೆಚ್ಚಿನ ಹೊತ್ತು ನೀಡಿದ್ದರು.ಈ ನಿಟ್ಟಿನಲ್ಲಿ ಬಿಜೆಪಿ ಹೈ ಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿತ್ತು. ಅಮಿತ್ ಶಾ ಸ್ವತಃ ವಿಜಯೇಂದ್ರಗೆ ಕರೆ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ಭದ್ರವಾಗಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನ ಪಡೆದರು ಜೆಡಿಎಸ್ ಶೂನ್ಯ ಫಲಿತಾಂಶ ಬಂದಿತ್ತು.



