ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಸರ್ಕಾರದ ನಿರ್ದೇಶನದಂತೆ ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡಿ ಅರ್ಹತೆ ಆಧಾರದ ಮೇಲೆ ತುಂಬ ಬೇಕಾಗಿರುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ, ಶೈಕ್ಷಣಿಕ ಅರ್ಹತೆ, ವಿಳಾಸ, ಪೆÇೀನ್ ನಂಬರ್ ಒಳಗೊಂಡ ಇನ್ನಿತರೆ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 30, 2022 ರೊಳಗಾಗಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



