ಪಶ್ಚಿಮ ಬಂಗಾಳ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ. ಜನರು ಪ್ರತಿಭಟನೆ ನಡೆಸದೆ ಅಶಾಂತಿ ಕಾಪಾಡಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ.
WB CM Mamata Banerjee:I request everyone to not create any disturbance or involve in any kind of violence. Be sure that #CitizenshipAmendmentAct&National Register of Citizens (NRC) will not be implemented in Bengal as we won't allow it. Please don't block roads&take law in hands. pic.twitter.com/upN2ONMiey
— ANI (@ANI) December 14, 2019
ಪ್ರತಿಭಟನೆಯಿಂದ ಜನಜೀವನಕ್ಕೆ ಅಡಚಣೆ ಉಂಟಾಗುತ್ತದೆ. ಜನರು ಹಿಂಸೆಯಲ್ಲಿ ಭಾಗಿಯಾಗಬಾರದು ಎಂದು ಮನವಿ ಮಾಡಿಕೊಂಡಿದ್ಧಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ. ಈ ಬಗ್ಗೆ ಪ್ರತಿಭಟನೆ ಮೂಲಕ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎರಡು ಸದಸನದಲ್ಲಿ ಕಾಯ್ದೆಗೆ ಒಪ್ಪಿಗೆ ದೊರೆಯುತ್ತಿದ್ದಂತೆ ಅಸ್ಸಾಂನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದೆ. ಕರ್ಫ್ಯೂ ಜಾರಿ ಮಾಡಿದರೂ, ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ