ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರದಲ್ಲಿ ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ. ಎಲ್ಲಾ ಸಮಾಜಕ್ಕೂ ಡಿಸಿಎಂ ಸ್ಥಾನ ನೀಡಲು ಸಾಧ್ಯವಿಲ್ಲ. ಸಿಎಂ ಹುದ್ದೆ ಒಂದೇ ಸಾಕು. ಈ ಕೂಡಲೇ ಡಿಸಿಎಂ ಹುದ್ದೆ ರದ್ದು ಮಾಡಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಜಾತಿಗೆ ಒಂದು ಡಿಸಿಎಂ ಸ್ಥಾನ ನೀಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚಸ್ಸು ಇದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ಒಂದೇ ಸಾಕು ಎಂದರು.
ಸಚಿವ ಸ್ಥಾನಕ್ಕೆ ಅನೇಕ ಜಿಲ್ಲೆಯಲ್ಲಿ ಆಕಾಂಕ್ಷಿಗಳಿದ್ದಾರೆ . ಅದರಲ್ಲೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನಾನೂ ಕೂಡ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ. ಈ ಬಗ್ಗೆ ಯಾವುದೇ ಬೀದಿ ರಂಪಾಟ ಮಾಡುವುದಿಲ್ಲ. ನಾನು ಕೂಡ 3 ಸಲ ಶಾಸಕರಾಗಿದ್ದೇನೆ. ಮಂತ್ರಿಯಾಗಿದ್ದೇನೆ. ಅನುಭವ ಆಧಾರಿಸಿ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಇನ್ನು ಮೂರುವರೆ ವರ್ಷ ಬಿಜೆಪಿ ಸುಭದ್ರವಾಗಿ ಅಧಿಕಾರದಲ್ಲಿರುತ್ತದೆ ಎಂದರು.



