ಡಿವಿಜಿ ಸುದ್ದಿ, ದಾವಣಗೆರೆ: ಮುಖ್ಯಮಂತ್ರಿ ಬಿಎ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸುಭದ್ರವಾಗಿದೆ. ಆದರೆ, ಸಚಿವ ಸಂಪುಟ ವಿಸ್ತರಿಸುವುದೇ ಕಗ್ಗಂಟಾಗಿ ಪರಿಣಮಿಸಿದೆ ಎಂದು ಸಂಸದ ಜಿ. ಎಂ ಸಿದ್ದೇಶ್ವರ್ ಹೇಳಿದರು.
ಜಿಲ್ಲಾ ಬಿಜೆಪಿ ಘಟಕ ವತಿಯಿಂದ ಆಯೋಜಿಸಿದ್ದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಧ್ಯೆ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಮಂತ್ರಿ ಸ್ಥಾನ ಕೊಡಲೇಬೇಕೆಂದು ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 6ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಯಾರಿಗಾದ್ರು ಮಂತ್ರಿ ಮಾಡಿ ಬೇಜಾರಿಲ್ಲ. ಆದರೆ, ಜಿಲ್ಲೆಗೆ ಒಂದು ಸ್ಥಾನ ನೀಡಬೇಕು. ಈ ಹಿಂದೆ ನಮ್ಮ ಜಿಲ್ಲೆಗೆ ಮೂರು ಜನ ಸಚಿವರಿದ್ದರು. ಈ ಬಾರಿ ಕನಿಷ್ಠ ಒಬ್ಬರಿಗಾದ್ರು ಕೊಡಿ ಎಂದು ಆಗ್ರಹಿಸಿದರು.