ಡಿವಿಜಿ ಸುದ್ದಿ, ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಾಳೆ (ಡಿ.17) ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಟ್ಟಡದ ತುಂಗಭದ್ರಾ ಸಭಾಂಗಣದಲ್ಲಿ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡಲು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮಾರ್ಗದರ್ಶನ ಪಡೆಯಲು ಅರ್ಹರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ ಇವರುಗಳು ಉದ್ಘಾಟಿಸಿ ಉಪನ್ಯಾಸ ನೀಡುವರು.
ಮಧ್ಯಾಹ್ನ 12.45 ರಿಂದ 1.45 ರವರೆಗೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ದತೆಯ ಬಗ್ಗೆ ತಿಳಿಸುವರು. ಮಧ್ಯಾಹ್ನ 2.30 ರಿಂದ 3.30 ರವರೆಗೆ ಶ್ರೀರಾಮಚಂದ್ರರಾವ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಪಟ್ಟಂತೆ ಹಾಗೂ ಭೂಗೋಳಶಾಸ್ತ್ರ ಪಠ್ಯ ಕ್ರಮದ ಅರಿವು ಮೂಡಿಸುವರು. ಮಧ್ಯಾಹ್ನ 3.45 ರಿಂದ 4.30 ರವರೆಗೆ ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಬಿ.ಎಂ.ದ್ವಾರುಕೇಶ್ ಮಾನಸಿಕ ಸಾಮಥ್ರ್ಯದ ಬಗ್ಗೆ ತಿಳಿಸುವರು. ಸಂಜೆ 4.30 ರಿಂದ 5 ಗಂಟೆಯವರೆಗೆ ನಿವೃತ್ತ ಯೋಧರಾದ ಮಂಜಾನಾಯ್ಕ ಭಾರತೀಯ ಸೇನೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸೇನೆಯಲ್ಲಿನ ಅವಕಾಶಗಳ ಬಗ್ಗೆ ಮಾತಾನಾಡಲಿದ್ದಾರೆ.



