ಡಿವಿಜಿ ಸುದ್ದಿ, ದಾವಣಗೆರೆ :ದಾವಣಗೆರೆ ಮಹಾನಗರ ಪಾಲಿಕೆಯ 2020-21 ನೇ ಸಾಲಿನ ಆಯ-ವ್ಯಯವನ್ನು ತಯಾರಿಸಲು ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಸಲಹೆ-ಸೂಚನೆಗಳನ್ನು ಪಡೆಯಲು ಪೂರ್ವಭಾವಿ ಸಭೆಯನ್ನು ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ನಾಳೆ (ಡಿ. 17) ರಂದು ಸಂಜೆ 4.00 ಗಂಟೆಗೆ ಆಯೋಜಿಸಲಾಗಿದೆ.
ದಾವಣಗೆರೆ ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಈ ಸಭೆಗೆ ಹಾಜರಾಗಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಾದ ಮಂಜುನಾಥ್ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.