ದಾವಣಗೆರೆ: 2022-23ನೇ ಸಾಲಿನ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ 1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯ ದಿನದಂದು ಪ್ರಧಾನ ಮಾಡಿ ಗೌರವಿಸಲಾಗುವುದು.
ಅರ್ಜಿಯನ್ನು ಸೆ.31 ರೊಳಗೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪನಿರ್ದೆಶಕರ ಕಛೇರಿ, 14ನೇ ಮುಖ್ಯರಸ್ತೆ, ಎಂ.ಸಿ.ಸಿ. ‘ಬಿ’ ಬ್ಲಾಕ್, ಕುವೆಂಪುನಗರ, ದಾವಣಗೆರೆ ಇಲ್ಲಿ ಅರ್ಜಿ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಕಛೇರಿಗೆ ಸಲ್ಲಿಸತಕ್ಕದ್ದು, ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-264056 ಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.