ಡಿವಿಜಿ ಸುದ್ದಿ, ಬೆಂಗಳೂರು: ಕೆಂದ್ರ ಸರ್ಕಾರದ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ಜೆಡಿಎಸ್ ನೂತನ ಕಾಯ್ದೆಯನ್ನು ಖಂಡಿಸುತ್ತದೆ ಎಂದು ಎಂದು ಮಾಜಿ ಸಿಎಂ ಕುಮಾರಸ್ವಾಮಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅದನ್ನು ಬಗೆಹರಿಸದು ಬಿಟ್ಟು ಕೇಂದ್ರ ಸರ್ಕಾರ ಹೊಸ ಸಮಸ್ಯೆ ಹುಟ್ಟು ಹಾಕಿದೆ. ನಮ್ಮ ದೇಶಕ್ಕೆ ಅದರದ್ದೆ ಆದ ಇತಿಹಾಸವಿದೆ. ಬಹುಧರ್ಮಗಳ ದೇಶ ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ಭಾರತ ಹಿಂದೂ ರಾಷ್ಟ್ರ ಎನ್ನುವ ಭಾವನೆ ಜನರ ಮನಸ್ಸಿನಲ್ಲಿ ಬರಬೇಕೆಂದು ಬಿಜೆಪಿ ಪೌರತ್ವ ಕಾಯ್ದೆ ಜಾರಿಗೆ ತರಲು ಹೊರಟಿದೆ ಎಂದು ಟೀಕಿಸಿದರು.
ನಾನು ಸಾವರ್ಕರ್ ಬಗ್ಗೆ ಮಾತನಾಡಲ್ಲ. ಏಕೆಂದರೆ, ಆಗ ನಾನು ಹುಟ್ಟಿರಲಿಲ್ಲ.ವಲಸೆ ಎನ್ನುವುದು ಕೇವಲ ಭಾರತದ ಸಮಸ್ಯೆಯಲ್ಲ. ವಿಶ್ವದೆಲ್ಲೆಡೆ ಈ ಸಮಸ್ಯೆ ಇದೆ. ದೇಶದಲ್ಲಿರುವ ಪ್ರತಿಯೊಬ್ಬ ನಾಗರಿಕನ ರಕ್ಷಣೆ ಸರ್ಕಾರದ ಕರ್ತವ್ಯ ಎಂದರು.
ಜನವರಿಯಿಂದಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ಕಾಯ್ದೆ ಜಾರಿಗೆ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಅವರಲ್ಲಿ ಗೊಂದಲವಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಅವರು ಏಕೆ ಮಾಡುತ್ತಿದೆ.
ಕಲಮ ಮುಂದೆ ಮುದಡಲಿದೆ
ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲುವು ಸಾಧಿಸುವುದು ಸಹಜ. ಕಳೆದ ಬಾರಿ ಗುಂಡ್ಲುಪೇಟೆ , ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದಿದ್ದಿತ್ತು. ಆದಾದ ನಂತರದ ಚುನಾವಾಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್‌ಗೆ ಸೋತಿತ್ತು.ಸುಭದ್ರ ಸರ್ಕಾರ ಬಯಸಿ ಜನ ಬಿಜೆಪಿಗೆ ಮತ ನೀಡಿದ್ದಾರೆ. ಕಮಲ ಇಂದು ಅರಳಿದೆ ಮುಂದೆ ಮುದುಡಬಹುದು ಎಂದು ಹೇಳಿದರು.



