Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಕಸಾಪ, ಲಯನ್ಸ್ ಕ್ಲಬ್ ವತಿಯಿಂದ ಇಂಜಿನಿಯರ್ , ಶಿಕ್ಷಕರ ದಿನಾಚರಣೆ

ದಾವಣಗೆರೆ

ದಾವಣಗೆರೆ: ಜಿಲ್ಲಾ ಕಸಾಪ, ಲಯನ್ಸ್ ಕ್ಲಬ್ ವತಿಯಿಂದ ಇಂಜಿನಿಯರ್ , ಶಿಕ್ಷಕರ ದಿನಾಚರಣೆ

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿದ್ಯಾನಗರದ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಎಂಜಿನಿಯರ್ ದಿನಾಚರಣೆ ಮತ್ತು ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ನಗರದ ತರಳಬಾಳು ಬಡಾವಣೆಯಲ್ಲಿನ ಮಾಗನೂರು ಬಸಪ್ಪ ಸಭಾಂಗಣದಲ್ಲಿ ವಿಶ್ವೇಶ್ವರಯ್ಯನವರ ಮತ್ತು ರಾಧಾಕೃಷ್ಣನ್ ಅವರ ಭಾವಚಿತ್ರಗಳನ್ನು ಅಕ್ಕಪಕ್ಕದಲ್ಲಿಟ್ಟು ಅತಿಥಿ ಗಣ್ಯರಿಂದ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್‍ನ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶಗೌಡರು, ಸರ್ ಎಂ. ವಿಶ್ವೇಶ್ವರಯ್ಯ ಇಲ್ಲದೇ ಹೋಗಿದ್ದರೆ ನೀರಾವರಿ ವ್ಯವಸ್ಥೆಯೇ ಅಸ್ತಿತ್ವಕ್ಕೆ ಬರುತ್ತಿರಲಿಲ್ಲವೆನಿಸುತ್ತದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣಕ್ಕೆ ಒಳ್ಳೆಯ ಅಡಿಪಾಯ ಹಾಕಿದ್ದಾರೆ. ಶಿಕ್ಷಕರ ಬದುಕಿನ ಆಶಾಕಿರಣರಾಗಿದ್ದಾರೆ. ಈ ಇಬ್ಬರು ಮಹಾನಿಯರು ಆದರ್ಶಮಯ ಬದುಕು ನಮ್ಮೆಲ್ಲರ ಉಜ್ವಲ ಬದುಕಿಗೂ ಪ್ರೇರಕ ಎಂದು ಅಭಿಪ್ರಾಯಪಟ್ಟರು.

ಸರ್ ಎಂ. ವಿಶ್ವೇಶ್ವರಯ್ಯನವರ ಕುರಿತು ಉಪನ್ಯಾಸ ನೀಡಿದ ಸಿವಿಲ್ ಎಂಜಿನಿಯರ್ ಹೆಚ್.ವಿ. ಮಂಜುನಾಥಸ್ವಾಮಿ, ತಂತ್ರಜ್ಞಾನ ಇಲ್ಲದ ಹೊತ್ತಿನಲ್ಲಿಯೇ ಸರ್ ಎಂ. ವಿಶ್ವೇಶ್ವರಯ್ಯನವರು ಅಣೆಕಟ್ಟು ಸೇರಿದಂತೆ ವಿವಿಧ ಕಟ್ಟಡಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಾರತದ ಸೃಷ್ಠಿಗೆ ಅಡಿಪಾಯ ಹಾಕಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅಗಾಧ ಕೊಡುಗೆ ನೀಡಿದ್ದಾರೆ. ರಾಷ್ಟ್ರ ಕಂಡ ವಿಶ್ವದ ಶ್ರೇಷ್ಠ ತಂತ್ರಜ್ಞರು. ದಕ್ಷ, ಪ್ರಾಮಾಣಿಕ ಆಡಳಿತಗಾರರು. ಮೇಧಾವಿಗಳು, ಸರಳ, ಸಜ್ಜನಿಕೆಯ ಜೊತೆಗೆ ಸಾರ್ಥಕ ಬದುಕನ್ನು ನಡೆಸಿದ ಮಹಾನ್ ಚೇತನ ಸರ್ ಎಂ. ವಿಶ್ವೇಶ್ವರಯ್ಯ ಅವರೆಂದು ಸ್ಮರಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ಭೀಮಾಶಂಕರ್ ಜೋಷಿ ಅವರು, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕುರಿತು ಉಪನ್ಯಾಸ ನೀಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಭದ್ರ ಬುನಾದಿ ಹಾಕಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತ ರತ್ನ ಪ್ರಶಸಿ ಪಡೆದ ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಇವರುಗಳು ಅನಗ್ರ್ಯ ರತ್ನಗಳು ಎಂದರು.

ವಿಶ್ರಾಂತ ಎಂಜಿನಿಯರ್ ಎಲ್.ಎಸ್. ಪ್ರಭುದೇವ್, ವಿಶ್ರಾಂತ ಮುಖ್ಯೋಪಾಧ್ಯಾಯ ಎಸ್.ಆರ್. ಶಿರಗಂಬಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಇಬ್ಬರೂ ಮಹಾನೀಯರು ಜನರ ಜೀವನೋದ್ದಾರಕ್ಕಾಗಿ ಕೊಟ್ಟ ಕೊಡುಗೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ. ಅಲ್ಲದೇ ಜನರ ಬದುಕಿಗೆ ಆಶಾಕಿರಣಗಳಾಗಿವೆ. ಇವರ ತತ್ವಾದರ್ಶಗಳಡಿ ನಮ್ಮ ಬದುಕನ್ನು ಸಾಗಿಸೋಣವೆಂದರು.

ದಾವಣಗೆರೆ ವಿದ್ಯಾನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ದಿಳ್ಯಪ್ಪ ಪ್ರಾಸ್ತವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಜಿ. ರುದ್ರಯ್ಯ, ಲಯನ್ಸ್ ಕ್ಲಬ್ ಮಾಜಿ ಗೌರ್ನರ್‍ಗಳಾದ ಹೆಚ್.ಎನ್. ಶಿವಕುಮಾರ್, ಎ.ಆರ್. ಉಜ್ಜನಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸುಮತಿ ಜಯಪ್ಪ, ದಾಗಿನಕಟ್ಟೆ ಪರಮೇಶ್ವರಪ್ಪ, ಎಸ್.ಎಂ. ಮಲ್ಲಮ್ಮ, ರೇವಣಸಿದ್ದಪ್ಪ ಅಂಗಡಿ ಬೈರೇಶ್, ಡಿ ಎಂ ಮಂಜುನಾಥಯ್ಯ, ಜಿಗಳಿ ಪ್ರಕಾಶ್ ವೀರೇಶ್ ಪ್ರಸಾದ್ ಸೇರಿದಂತೆ ಇತರರು ಇದ್ದರು. ಕೆ. ರಾಘವೇಂದ್ರ ನಾಯರಿ ನಿರೂಪಿಸಿದರು. ಜಗದೀಶ್ ಕೂಲಂಬಿ ಸ್ವಾಗತಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top