ದಾವಣಗೆರೆ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯು, ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, 03 ವರ್ಷಗಳ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮ ಪದವಿ ತರಗತಿಯನ್ನು ನಡೆಸುತ್ತಿದ್ದು ಸೆ.30 ರೊಳಗಾಗಿ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಬಹುದಾಗಿದೆ.
ಈ ಸಂಸ್ಥೆಯು ಅಖಿಲ ಭಾರತತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಹೊಂದಿದ್ದು, ಪ್ರವೇಶ ಪಡೆಯುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ದಿನಾಂಕ: 01-07-2022 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2.500/- ಶಿಷ್ಯವೇತನ ನೀಡಲಾಗುವುದು ಹಾಗೂ ಬಾಲಕರ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಬಾಲಕಿಯರಿಗೆ ವಸತಿ ನಿಲಯದ ಸೌಲಭ್ಯವಿರುವುದಿಲ್ಲ. 03 ವರ್ಷಗಳ ವ್ಯಾಸಂಗದ ನಂತರ ಅಭ್ಯರ್ಥಿಗಳಿಗೆ ಜವಳಿ ಹಾಗೂ ಗಾರ್ಮೆಂಟ್ಸ್ ಉದ್ಯಮದಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತವೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಯನ್ನು ಪಡೆಯಲು ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ದೂರವಾಣಿ ಸಂಖ್ಯೆ:08372-297221 ಮೊಬೈಲ್ ಸಂಖ್ಯೆ: 9448644074 ಅಥವಾ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರಾಮಾಂಜನೇಯ ಪ್ಲಾಜ, ಕಾಲೇಜ್ ರಸ್ತೆ, ನಿಟ್ಟುವಳ್ಳಿ, ದಾವಣಗೆರೆ. ದೂರವಾಣಿ ಸಂಖ್ಯೆ: 08192-262362 ನ್ನು ಸಂಪರ್ಕಿಸಬಹುದೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.