ದಾವಣಗೆರೆ: 2022-23ನೇ ಸಾಲಿನಲ್ಲಿ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಅಲ್ಪಸಂಖ್ಯಾತರ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಭೌದ್ದ, ಪಾರ್ಸಿ ಸಿಖ್) ಸಮುದಾಯವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ(ಐಎಎಸ್/ಐಪಿಎಎಸ್ ಮತ್ತು ಇತರೆ) ಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಜಿಯನ್ನು ಆನ್‍ಲೈನ್sw.kar.nic.in ನ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.ಸಂ:8277799990ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.