ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ.26 ರಂದು ಆರ್.ಟಿ.ಓ ಆಫೀಸ್ ಹತ್ತಿರ, ಎಸ್.ಪಿ.ಎಸ್ ನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಘನ ಉಪಸ್ಥಿತರಿರುವರು. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಸಂಸದ ಜಿ.ಎಂ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಎಸ್.ಎ ರವೀಂದ್ರನಾಥ್, ಎಸ್.ರಾಮಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಅಬ್ದುಲ್ ಜಬ್ಬಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್ ನಾಯ್ಕ, ಪಾಲಿಕೆಯ ಮಹಾಪೌರರದ ಆರ್ ಜಯಮ್ಮ, ದೂಡಾ ಅಧ್ಯಕ್ಷರಾದ ಕೆ.ಎಂ ಸುರೇಶ್, ಪಾಲಿಕೆ ಸದಸ್ಯರಾದ ಸುಧಾ ಇಟ್ಟಿಗುಡಿ ಮಂಜುನಾಥ್ ಪಾಲ್ಗೋಳ್ಳುವರು.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್, ಆಯುಕ್ತರಾದ ಡಾ.ರಾಕೇಶ್ ಕುಮಾರ್ ಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಾದ ರಮೇಶ್ ದೇಸಾಯಿ ಭಾಗವಹಿಸುವರು. ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಕ.ವ.ಶಿ.ಸ ಸಂಘದ ಅಧೀಕ್ಷಕ ಅಭಿಯಂತರರಾದ ಹೆಚ್ ಎಲ್ ವೆಂಕಟೇಶ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೌಸರ್ ರೇಷ್ಮಾ.ಜಿ, ಕ.ವ.ಶಿ.ಸ ಸಂಘದ ಕಾರ್ಯಪಾಲಕ ಅಭಿಯಂತರರಾದ ಆರ್.ನಿತಿನ್, ಕ.ವ.ಶಿ.ಸ ಸಂಘದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ ಗುರುಮೂರ್ತಿ ಭಾಗವಹಿಸುವರು.